ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ/governament job-2024

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿಯನ್ನು ಅರ್ಹತೆ ಇರುವ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ, ಹುದ್ದೆಗಳ ವಿವರ,ವಿದ್ಯಾರ್ಹತೆ,ವಯೋಮಿತಿ ಇನ್ನಿತರ ಮಾಹಿತಿಯಗಳನ್ನು ಪಡೆಯಲು ಈ ಲೇಖನವನ್ನು ಕೊನೆಯವರೆಗೂ ಓದಿ..

ನೇಮಕಾತಿ ಇಲಾಖೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು
ಹುದ್ದೆಯ ಹೆಸರು :
1) ಅಂಗನವಾಡಿ ಕಾರ್ಯಕರ್ತೆ
2) ಅಂಗನವಾಡಿ ಸಹಾಯಕಿ
ಹುದ್ದೆಗಳ ಸಂಖ್ಯೆ : ಒಟ್ಟು 384 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
( 106 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಮತ್ತು 278 ಅಂಗನವಾಡಿ ಸಹಾಯಕಿ ಹುದ್ದೆಗಳು)

ವಿದ್ಯಾರ್ಹತೆ:
1) ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:-
1). ಕನಿಷ್ಮ ದ್ವಿತೀಯ PUC ತೇರ್ಗಡೆ ಹೊಂದಿರಬೇಕು. SSLC/10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು..
2). ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ DSERT ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, NTT ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ or ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಇರುವವರಿಗೆ ಮೊದಲ ಆದ್ಯತೆ ಇರುತ್ತದೆ ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ಕೊಡಲಾಗುತ್ತದೆ…

2) ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:
ಈ ಹುದ್ದೆಗೆ ಕನಿಷ್ಮ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಪಾಸ್ ಆಗಿರಬೇಕು..
1) ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ SSLC/10ನೇ ತರಗತಿಯಲ್ಲಿ ಪಾಸ್ ಆದ ಅಭ್ಯರ್ಥಿಗಳು ಪಥಮ ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ಓದಿರಬೇಕು, ಪ್ರಮಾಣ ಪತ್ರ ಅಂಕಪಟ್ಟಿಯು ಗರಿಷ್ಮ 625 ಕನಿಷ್ಠ 219 ಮಾರ್ಕ್ಸ್ ಪಡೆದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.

ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 19 ರಿಂದ 35
ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಈ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವೀಶೇಷಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ..

ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಆಯ್ಕೆ ಆದ್ಯತೆಗಳಾದ ವಿಧವೆ ಅಂಗವಿಕಲ ಆಸಿಡ್ ಸಂತ್ರಸ್ತೆ ಇತರೆ ಅಂಶಗಳನ್ನು ಪರಿಗಣಿಸಿ, ಅಂಕಗಳನ್ನು ನೀಡಿ ಇಲಾಖೆಯು ನೇಮಕಾತಿ ಮಾಡುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಪ್ರವೇಶಿಸಿ
ಆನೈನ್ ಮೂಲಕ ಅರ್ಜಿ ಸಲ್ಲಿಸಬೇಕು, ಇನ್ನು ಇತರೆ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10 ಜನವರಿ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಫೆಬ್ರವರಿ 2024

■ ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:-
* ಅರ್ಜಿ ನಿಗದಿತ ನಮೂನೆ (ಆನ್ ಲೈನ್)
* ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ SSLC/10ನೇ ತರಗತಿ ಅಂಕಪಟ್ಟಿ.
* ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ.
* ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ 3 ವರ್ಷದ ಒಳಗಿನ ವಾಸಸ್ಥಳ ದೃಢೀಕರಣ ಪತ್ರ.
* ಅರ್ಜಿ ಹಾಕುವ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ.
*ಪತಿ ಮರಣ ಹೊಂದಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪಮಾಣ ಪತ್ರ
* ಅಂಗವಿಕಲರಾಗಿದ್ದಲ್ಲಿ ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
* ವಿಚ್ಛೇದನ ಪ್ರಮಾಣ ಪತ್ರ (ಡೈವೋರ್ಸ್ ಮಾಡಿದ್ದಲ್ಲಿ ಮಾತ್ರ,ನ್ಯಾಯಾಲಯದಿಂದ ಪಡೆದಿರಬೇಕು)
* ದೇವದಾಸಿ ಮಕ್ಕಳು ಆಗಿದ್ದಲ್ಲಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
* ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
* ಯೋಜನಾ ನಿರಾಶ್ರಿತರು ಆಗಿದ್ದಲ್ಲಿ ತಹಶೀಲ್ದಾರರಿಂದ ಪಡೆದ ಪಮಾಣ ಪತ್ರ
* ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ

ನೆನಪಿರಲಿ ನಾವು ಮೇಲೆ ತಿಳಿಸಿದ ಪ್ರತಿಯೊಂದು ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಅರ್ಜಿ ಹೊಂದಿಗೆ ಸಲ್ಲಿಸಬೇಕು.

ಅಧಿಸೂಚನೆ – ಕ್ಲಿಕ್ಕಿಸಿ

ಇಲಾಖೆಯ ವೆಬ್‌ಸೈಟ್
https://karnemakaone.kar.nic.in/abcd

■ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಫಲಾನುಭವಿಗಳಿಂದ
ಅರ್ಜಿ ಕರೆಯಲಾಗಿದೆ ಹುದ್ದೆಗಳ ವಿವರ ಇನ್ನಿತರ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆತನಕ ಓದಿ.

ನೇಮಕಾತಿ ಇಲಾಖೆಯ ಹೆಸರು : ಮಂಗಳೂರು ರಿಫೈನರಿ
ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್).
ಹುದ್ದೆಯ ಹೆಸರು : ಸಹಾಯಕ ಇಂಜಿನಿಯರ್ ಹುದ್ದೆ,ಹಾಗೂ
ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳು
ಹುದ್ದೆಗಳ ಸಂಖ್ಯೆ : ಒಟ್ಟು ಇಲ್ಲಿ 58 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಇಚ್ಚೆಹಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
ಗಮನಿಸಿ : ಹೆಚ್ಚಿನ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿರಿ.

ವಯಸ್ಸಿನ ಮಿತಿ :
ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.
ಗೆಳೆಯರೆ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೀಸಲಾತಿಗನುಗುಣವಾಗಿ ಸಡಿಲಿಕೆ ನೀಡಲಾಗುವುದು ಅಧಿಸೂಚನೆ ಗಮನಿಸಿ.

ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ರೂಪಾಯಿ 118/- ನಿಗದಿಪಡಿಸಲಾಗಿದೆ.
ಎಸ್ ಸಿ/ಎಸ್‌ಟಿ/ಅಂ/ಮಾ.ಸೈ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಪ್ರವೇಶಿಸಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ವಿಧಾನ
ಅರ್ಜಿ ಹಾಕಿದ ಅಭ್ಯರ್ಥಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು
ಗುಂಪು ಚರ್ಚೆ ಮತ್ತು ಸಂದರ್ಶನವನ್ನು ಮಾಡಿ ಆಯ್ಕೆ ಪ್ರಕ್ರಿಯೆಯನ್ನು ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 12 ಜನವರಿ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಫೆಬ್ರವರಿ 2024

ಅಧಿಕೃತ ವೆಬ್‌ಸೈಟ್ : www.mrpl.com.in

 ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ-2024

ಗೆಳೆಯರೆ ಕರ್ನಾಟಕ ಅ ಪೊಲೀಸ್ ಇಲಾಖೆಯಲ್ಲಿ 16 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 16 ತಾಂತ್ರಿಕ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ

ಈ ಇಲಾಖೆಯಲ್ಲಿ 08 ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಹುದ್ದೆಗಳು ಜೊತೆಗೆ 08 ಡಿಜಿಟಲ್ ಫೋರೆನ್ಸಿಕ್ ಅನಾಲಿಸ್ಟ್ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ,ಅಭ್ಯರ್ಥಿ ಅರ್ಜಿಯನ್ನು ಸಲ್ಲಿಸಲು ಬಿ.ಇ/ಬಿ.ಟೆಕ್/ಬಿ.ಸಿ.ಎ/ ಎಂ.ಎಸ್.ಸಿ/ಎಂ.ಸಿ.ಎ (Information Technology/ Computer
Science/ Electronics & Communication/
Telecommunications) ತತ್ಸಮಾನ ಅಥವಾ ಸಂಬಂಧಿತ ಪದವಿಯಲ್ಲಿ ಪಾಸ್ ಮಾಡಿದ ಅಭ್ಯರ್ಥಿ ಅರ್ಜಿ ಹಾಕಬಹುದು,

ಈ ಹುದ್ದೆಗಳಿಗೆ ವಯೋಮಿತಿ 25 ರಿಂದ 35 ವರ್ಷ
ನಿಗದಿಪಡಿಸಲಾಗಿದೆ,
ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್
https://bcp.karnataka.gov.in
ಅಗತ್ಯ ಇರುವ ದಾಖಲೆಗಳನ್ನು ತೆಗೆದುಕೊಂಡು ದಿನಾಂಕ 24 ಜನವರಿ 2024ರ ಒಳಗೆ
ಇಲಾಖೆಗೆ ಇಮೇಲ್ ಮಾಡುವ ಮೂಲಕ ಅಥವಾ ಅಂಚೆಯ ಮೂಲಕ ಅರ್ಜಿ ಸಲ್ಲಿಸಬೇಕು,

ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://bcp.karnataka.gov.in

https://ksp.karnataka.gov.in 23ee3e@o

ನೆನಪಿರಲಿ : ಅಭ್ಯರ್ಥಿ ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ ಓದಿ, ಸ್ಪಷ್ಟವಾಗಿ
ಅರ್ಥೈಸಿಕೊಂಡ ನಂತರವೇ ಅರ್ಜಿ ಸಲ್ಲಿಸಿ.

ಗೆಳೆಯರೆ ನಮಸ್ಕಾರ ಉದ್ಯೋಗ ಮಾಹಿತಿ,ಸರ್ಕಾರಿ ಯೋಜನೆಗಳು ಹಾಗೂ ಇನ್ನಿತರ ಮಾಹಿತಿಗಳನ್ನು ಪಡೆಯಲು ನಿಮ್ಮ ksKannada2.com ವೆಬ್ಸೈಟ್ ಅನ್ನು ದಿನಾ ನೋಡುತ್ತಿರಿ ಧನ್ಯವಾದಗಳು…Manju Jyavalli

Leave a Comment